ವಿಜಯ್ ದೇವರಕೊಂಡ ಜೊತೆ ಮಾಲ್ಡೀವ್ಸ್‌ಗೆ ತೆರಳಿದ ರಶ್ಮಿಕಾ..!
ಜೋಡಿಯಾಗಿ ಮಾಲ್ಡೀವ್ಸ್ ಗೆ ವಿಮಾನ ಹತ್ತಿದ ಇವರಿಬ್ಬರ ಪ್ರೇಮ ಪ್ರಕರಣ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ

ಚೆನ್ನೈ : ತಮಿಳಿನಲ್ಲಿ ಕಾರ್ತಿಕ್ ಜೊತೆ ನಟಿಸಿದ್ದ ರಶ್ಮಿಕಾ ಮಂದಣ್ಣ, ಈಗ ಮತ್ತೊಂದು ಸಿನಿಮಾದಲ್ಲಿ ವಿಜಯ್ ಗೆ ಜೋಡಿಯಾಗಿದ್ದಾರೆ. ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸದ್ಯ ತೆಲುಗು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಬೇರೆಯವರ ಜೊತೆ ನಂಟು ಹೊಂದಿದ್ದಾರೆ ಎಂಬ ವದಂತಿಯೂ ಹಬ್ಬಿತ್ತು.
ತೆಲುಗು ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಗೀತ ಗೋವಿಂದಂ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈ ಚಿತ್ರದಲ್ಲಿ ಇಬ್ಬರ ಕೆಮಿಸ್ಟ್ರಿ ಅದ್ಬುತವಾಗಿತ್ತು. ಈ ಚಿತ್ರ ಬಾಕ್ಸ್ ಆಫೀಸ್ ಹಿಟ್ ಆಗಿತ್ತು.
ಗೀತಾ ಗೋವಿಂದಂ ಚಿತ್ರದ ಯಶಸ್ಸಿನ ನಂತರ ಈ ಜೋಡಿ ಡಿಯರ್ ಕಾಮ್ರೇಡ್ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದು ಈ ಎರಡೂ ಚಿತ್ರಗಳ ಯಶಸ್ಸಿಗೆ ಇವರಿಬ್ಬರ ಕೆಮಿಸ್ಟ್ರಿಯೇ ಪ್ರಮುಖ ಕಾರಣ .
‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಾಗ ಅವರಿಬ್ಬರು ಪ್ರೀತಿಸುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು. ಈ ವದಂತಿ ನಿಜವೆಂಬಂತೆ ಡಿಯರ್ ಕಾಮ್ರೇಡ್ ಸಿನಿಮಾದಲ್ಲಿ ಲಿಪ್ ಲಾಕ್ ಸೀನ್ ಇತ್ತು. ಆದರೆ, ನಾವಿಬ್ಬರೂ ಸ್ನೇಹಿತರೇ ಹೊರತು ಪ್ರೇಮಿಗಳಲ್ಲ ಎಂದು ಹೇಳಿದರು .
ಅಂದಹಾಗೆ, ಈ ಜೋಡಿ ಸದ್ಯ ಮಾಲ್ಡೀವ್ಸ್‌ನಲ್ಲಿ ವಿಹಾರದಲ್ಲಿದ್ದಾರೆ. ಇದಕ್ಕಾಗಿ ಇಬ್ಬರೂ ಪ್ರತ್ಯೇಕವಾಗಿ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಆದರೆ, ಇಬ್ಬರೂ ಜೋಡಿಯಾಗಿ ಒಂದೇ ವಿಮಾನದಲ್ಲಿ ಮಾಲ್ಡೀವ್ಸ್‌ಗೆ ತೆರಳಿದ್ದಾರೆ .
ಮುಂಬೈ ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದು, ಅವರು ಆಗಮಿಸುವ ಕೆಲವು ನಿಮಿಷಗಳ ಮೊದಲು, ನಟ ವಿಜಯ್ ದೇವರಕೊಂಡ ಕೂಡ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು .
ಜೋಡಿಯಾಗಿ ಮಾಲ್ಡೀವ್ಸ್ ಗೆ ವಿಮಾನ ಹತ್ತಿದ ಇವರಿಬ್ಬರ ಪ್ರೇಮ ಪ್ರಕರಣ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.