2 ಹೆಚ್ಚುವರಿ ನ್ಯಾಯಾಧೀಶರ ನೇಮಕ

ಕರ್ನಾಟಕ ಹೈಕೋರ್ಟ್‌ಗೆ 2 ಹೆಚ್ಚುವರಿ ನ್ಯಾಯಾಧೀಶರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ 2 ಹೆಚ್ಚುವರಿ ನ್ಯಾಯಾಧೀಶರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿಯಾಗಿ 2 ನ್ಯಾಯಮೂರ್ತಿಗಳಾದ ರಾಮಚಂದ್ರ ದತ್ತಾತ್ರಾಯ್ ಗುತ್ತಾರ್ ಮತ್ತು ವೆಂಕಟೇಶ್ ನಾಯ್ಕ್ ಅವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ: Live News

ಇವರಲ್ಲಿ ರಾಮಚಂದ್ರ ಅವರು ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ವೆಂಕಟೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿಯಾಗಿದ್ದರು. ಇವರಿಬ್ಬರೂ ಕರ್ನಾಟಕ ಐಸಿಆರ್‌ಟಿಯ ಹೆಚ್ಚುವರಿ ನ್ಯಾಯಮೂರ್ತಿಗಳಾಗಿದ್ದಾರೆ. ನ್ಯಾಯಮೂರ್ತಿಗಳಾದ ರಾಮಚಂದ್ರ ದತ್ತಾತ್ರಾಯ್ ಗುಥಾರ್ ಮತ್ತು ವೆಂಕಟೇಶ್ ನಾಯಕ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಅದರಂತೆ ಕೇಂದ್ರ ಸರ್ಕಾರ ಈ ಆದೇಶ ಹೊರಡಿಸಿರುವುದು ಗಮನಾರ್ಹ.