ಮಂಡ್ಯ ಸಂಸದೆ ಸುಮಲತಾಗೆ ಕೊರೋನಾ ಸೋಂಕು

123Kannada (Kannada News) :

ಶಾಸಕರಾದ ಭರತ್ ಶೆಟ್ಟಿ, ಮಂಜುನಾಥ್ ನಂತರ ಈಗ ಸುಮಲತಾ ಅವರಿಗೂ ಕೊರೋನಾ ಅಟ್ಯಾಕ್

ಬೆಂಗಳೂರು: ಮಂಡ್ಯ ಸಂಸದೆ ಹಾಗೂ ಮಾಜಿ ಸಚಿವ ಅಂಬರೀಷ್ ಅವರ ಪತ್ನಿ ಸುಮಲತಾ ಅವರಿಗೆ ಕೊರೋನಾ ಸೋಂಕು ತಗುಲಿದೆ.

ಸೋಮವಾರ ಬೆಳಗ್ಗೆಯಷ್ಟೇ ಕುಣಿಗಲ್ ಶಾಸಕ ರಂಗನಾಥ್ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಇದಕ್ಕೆ ಮುನ್ನ ಮಂಗಳೂರಿನ ಶಾಸಕ ಭರತ್ ಶೆಟ್ಟಿ, ಹಾಗೂ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ದಂಪತಿಗೂ ಕೊರೋನಾ ಕಾಣಿಸಿಕೊಂಡಿತ್ತು.

ಈ ಬಗ್ಗೆ ಖುದ್ದು ಸುಮಲತಾ ಅವರೇ ಹೇಳಿಕೊಂಡಿದ್ದಾರೆ. ಅವರ ಹೇಳಿಕೆ ಹೀಗಿದೆ.

ಆತ್ಮೀಯರೆ,
ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು.

ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ.

ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.

ರೋಗ ನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ.

ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಸುಮಲತಾ ಹೇಳಿದ್ದಾರೆ.

ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTube ಅನುಸರಿಸಿ.