ಜಿಎಸ್​ಟಿ ಬಾಕಿ ಹಣ 11,400 ಕೋಟಿ ರೂ. ನೀಡಲು ಕೇಂದ್ರ ಒಪ್ಪಿಗೆ

ದೆಹಲಿ ಭೇಟಿ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧರಿಸಿದ್ದ ಉಡುಪು ಗಮನ ಸೆಳೆದಿದೆ. ಜುಬ್ಬಾ ಹಾಗೂ ಶಾಲು ಧರಿಸಿ ಕಂಗೊಳಿಸಿದ ಬೊಮ್ಮಾಯಿ, ತಮ್ಮ ಎಂದಿನ ಉಡುಗೆ, ತೊಡುಗೆಗಿಂತ ಕೊಂಚ ವಿಭಿನ್ನ ಶೈಲಿಯನ್ನು ಅನುಸರಿಸಿದ್ದು ಕಂಡುಬಂದಿತು.

123Kannada (Kannada News) :

ದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಅಲ್ಲಿ ಕೇಂದ್ರ ಆರೋಗ್ಯ ಸಚಿವ ಮನಸುಖ್​ ಮಾಂಡವೀಯ ಜತೆ ಚರ್ಚೆ ನಡೆಸಿ ಮುಂದಿನ ತಿಂಗಳಿಂದ ರಾಜ್ಯಕ್ಕೆ 1.5 ಕೋಟಿ ಡೋಸ್​ ಕೊರೊನಾ ಲಸಿಕೆ ಪೂರೈಸಲು ಮನವಿ ಸಲ್ಲಿಸಿದ್ದಾರೆ.

ಕೊರೊನಾ ಲಸಿಕೆ ಬಗ್ಗೆ ಆರೋಗ್ಯ ಸಚಿವರ ಜತೆ ಚರ್ಚಿಸಿರುವ ಅವರು, ಪ್ರಸ್ತುತ 60ರಿಂದ 65 ಲಕ್ಷ ಡೋಸ್​ ಲಸಿಕೆಯಷ್ಟಿರುವ ಪೂರೈಕೆಯನ್ನು 1.5 ಕೋಟಿ ಡೋಸ್​ಗೆ ಹೆಚ್ಚಳ ಮಾಡಲು ಬೇಡಿಕೆ ಇಟ್ಟಿದ್ದಾಗಿ ತಿಳಿಸಿದ್ದಾರೆ.

ಅಲ್ಲದೇ, ಈ ತಿಂಗಳಲ್ಲಿ 1 ಕೋಟಿ ಡೋಸ್ ಲಸಿಕೆ ನೀಡುವ ಗುರಿ ಇದೆ. ಕೊವಿಡ್ ಸಂಬಂಧ​ ಮೂಲಸೌಕರ್ಯಕ್ಕೆ 800 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಆರೋಗ್ಯ ಸಚಿವ ಮನಸುಖ್​ ಮಾಂಡವೀಯ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTube ಅನುಸರಿಸಿ.