ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ
14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಮಹಾರಾಷ್ಟ್ರದ ಥಾಣೆ:
ಮಹಾರಾಷ್ಟ್ರದ ಥಾಣೆ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಧೀಶರು ಇಂದು ಈ ಪ್ರಕರಣದ ತೀರ್ಪು ಪ್ರಕಟಿಸಿದರು.
ಅಪರಾಧಿಗೆ ಐಪಿಸಿ ಮತ್ತು ಪೋಕ್ಸೊ ಕಾಯ್ದೆಯಡಿ ಶಿಕ್ಷೆ ವಿಧಿಸಲಾಗಿದೆ.
20 ವರ್ಷಗಳ ಜೈಲು ಶಿಕ್ಷೆಯೊಂದಿಗೆ 30,000 ದಂಡವನ್ನೂ ವಿಧಿಸಲಾಗಿದೆ. ಈ ಆದೇಶಗಳನ್ನು ಅಕ್ಟೋಬರ್ 1 ರಂದು ಹೊರಡಿಸಲಾಗಿದೆ. ಆದರೆ ಶುಕ್ರವಾರ ತೀರ್ಪಿನ ಪ್ರತಿ ಬಿಡುಗಡೆಯಾಗಿದೆ. ಆರೋಪಿ ಸಂತ್ರಸ್ತೆಯ ಸಹೋದರನ ಸ್ನೇಹಿತ ಎಂದು ಪ್ರಾಸಿಕ್ಯೂಟರ್‌ಗಳು ವಾದಿಸಿದರು. 2015ರ ಜನವರಿ 15ರಂದು ಅತ್ಯಾಚಾರ ಘಟನೆ ನಡೆದಿತ್ತು. ಆದರೆ ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಯಾವುದೇ ತೀರ್ಪನ್ನು ಪ್ರಕಟಿಸಿರಲಿಲ್ಲ .
ಆ ವ್ಯಕ್ತಿ ಬಾಲಕಿಯ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪವಿದ್ದು . ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಸಂತ್ರಸ್ತೆಯನ್ನು ಸರ್ಕಾರ ಬೆಂಬಲಿಸುವಂತೆ ನ್ಯಾಯಾಧೀಶರು ಕೋರಿದ್ದರು.
ಆದರೆ ಇಂದು ಆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತೀರ್ಪನ್ನು ಪ್ರಕಟಿಸಲಾಗಿದ್ದು , ಅತ್ಯಾಚಾರವೆಸೆಗಿದ್ದ ವ್ಯಕ್ತಿಗೆ ವರ್ಷ ಜೈಲು ಶಿಕ್ಷೆ ಮತ್ತು ಸಾವಿರ ದಂಡವನ್ನು ವಿಧಿಸಿದ್ದಾರೆ .